ಕೊಡಗು

ಕುಶಾಲನಗರ ಸಂಪತ್ ನಾಯರ್ ಕೊಲೆ ಪ್ರಕರಣ: ಮೂವರ ಬಂಧನ

ಕುಶಾಲನಗರ: ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44), ಕಿರಣ್ ಪತ್ನಿ ಸಂಗೀತ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿದ ಆರೋಪಿ ಸಂಗೀತ, ಮೇ.9ರಂದು ಸಂಪತ್ ನಾಯರ್‌ನನ್ನು ಸೋಮವಾರಪೇಟೆಯ ಹಾನಗಲ್‌ಗೆ ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡಿದ್ದಾಳೆ. ಈ ವೇಳೆ ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಜೊತೆ ಸೇರಿ ಕೋವಿಯಿಂದ ಬೆದರಿಸಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾಳೆ.

ಕೊಲೆಯನ್ನು ಮರೆಮಾಚಲು ಮೃತದೇಹವನ್ನು, ಸಂಪತ್ ನಾಯರ್ ತಂದಿದ್ದ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲ್ಲೂಕಿನ ಒಳಗೂರು ಅರಣ್ಯದಲ್ಲಿ ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಮತ್ತೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು. ಮೇ.16ರಂದು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

1 min ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

6 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

23 mins ago

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…

1 hour ago

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

2 hours ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

5 hours ago