ಕೊಡಗು

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ

ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಕುಪ್ಪಳ್ಳಿಯಲ್ಲಿರುವ ಮನೆಯಂತೆ ಮೈಸೂರಿನಲ್ಲಿಯೂ ಕೂಡ ಉದಯರವಿ ಎಂಬ ಕುವೆಂಪುರವರ ಮನೆಯನ್ನು ಸಂಗ್ರಹಾಲಯವನ್ನಾಗಿ ಮಾಡಿ ಅಲ್ಲಿ ಅವರು ಬಳಸುತ್ತಿದ್ದ ಪುಸ್ತಕಗಳ ಪ್ರತಿ, ಹಲವಾರು ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗುತ್ತದೆ. ಇದು 2026ರ ಡಿ.29ರಂದು ಪ್ರಾರಂಭವಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ ತಿಳಿಸಿದರು.

ಕೊಡಗು ವಿಶ್ವವಿದ್ಯಾಲಯದ ಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಕನ್ನಡಸಿರಿ ಸ್ನೇಹ ಬಳಗ, ಹಾಗೂ ನಾಡಪ್ರಭು ಪತ್ತಿನ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವಮಾನವ ಕುವೆಂಪುರವರ ಜನ್ಮೋತ್ಸವ ಮತ್ತು-ಸಮಗ್ರ ಸಾಹಿತ್ಯದ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಾಗೂ ರಸಪ್ರಶ್ನೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕುವೆಂಪು ಅವರ ವಿಶ್ವ ಮಾನವ ಸಂದೇಶವನ್ನು ಪಂಪ ಹೇಳಿದಂತೆ ಮಾನವ ಕುಲಂ ತಾನೊಂದೆ ವಲಂ ಎಂಬ ತತ್ವದ ಅಡಿಯಲ್ಲಿ ಜಾತಿ, ಧರ್ಮ, ಭಾಷೆಗಳ ಬೇಲಿಯನ್ನು ಕಳಚಿ ಪ್ರತಿಯೊಬ್ಬರೂ ಸಂಕುಚಿತ ಮನೋಭಾವನೆಯಿಂದ ಹೊರಬರಬೇಕು. ಮಂತ್ರ ಮಾಂಗಲ್ಯ ಪರಿಕಲ್ಪನೆಯು ಕುವೆಂಪುರವರು ಹಿಂದೂ ವಿವಾಹಕ್ಕೆ ನೀಡಿದ ಸರಳ ವಿವಾಹ ಪದ್ಧತಿಯಾಗಿದೆ. ಇಂದಿನ ಸಮಾಜದಲ್ಲಿ ಪೋಷಕರು ಆಡಂಬರದ ವಿವಾಹಕ್ಕೆ ಸಿಲುಕಿ ತಮ್ಮ ಜೀವನವನ್ನು ಸಾಲದ ಕೂಪಕ್ಕೆ ಸಿಲುಕಿಸಿಕೊಳ್ಳುತ್ತಿದ್ದಾರೆ. ಅಂತವರಿಗೆ ಈ ಪರಿಕಲ್ಪನೆಯು ಒಂದು ಉತ್ತಮ ವಿಧಾನವಾಗಿದೆ ಎಂದರು.

ಶ್ರೀ ರಾಮಾಯಣ ದರ್ಶನಂ ಆಧುನಿಕ ಕಾಲದಲ್ಲಿನ ಮಹಾಕಾವ್ಯದ ವೈಶಿಷ್ಟತೆಯು ಮೂಲ ರಾಮಾಯಣಕ್ಕಿಂತ ವಿಭಿನ್ನ ಮತ್ತು ವಿಶೇಷವಾಗಿದೆ. ರಾಮನ ಆದರ್ಶಗಳು ಎದ್ದು ಕಾಣುತ್ತದೆ. ಕುವೆಂಪು ತಮ್ಮ ಸಾಹಿತ್ಯದಲ್ಲಿ ಕಾಡಿನ ಮೇಲೆ ಇದ್ದಂತಹ ಪ್ರೀತಿಯನ್ನು ಮತ್ತು ಆಸಕ್ತಿಯನ್ನು ತೋರ್ಪಡಿಸಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಮಾತನಾಡಿ, ಕುವೆಂಪು ಅವರ ಕಾವ್ಯದಲ್ಲಿ ವಿಶ್ವಮಾನವತಾವಾದ, ಆತ್ಮಶೋಧ, ಮನಸ್ಸಿನ ಅಂತರಂಗ, ಪ್ರಕೃತಿ-ಮಾನವ-ದೇವತೆಗಳ ಆಂತರಿಕ ಸಂಬಂಧದ ಸೂಕ್ಷ್ಮತೆ, ಭಾರತೀಯ ದಾರ್ಶನಿಕ ಪರಂಪರೆಯ ಸಂಧಾನಕ್ಕೆ ಅನುವು ಮಾಡಿಕೊಟ್ಟಿರುವುದನ್ನು ಕಾಣಬಹುದಾಗಿದೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

7 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

7 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

7 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

7 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

8 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

8 hours ago