ಕೊಡಗು: ನೂತನ ಆಸ್ಪತ್ರೆಯ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ಇಂದು (ಮಾ.2) ಮುಂಜಾನೆ ನಡೆದಿದೆ.
ಕಟ್ಟಡ ಕಾಮಗಾರಿ ನಡೆಯುವ ವೇಳೆ ಈ ದುರಂತ ನಡೆದಿದ್ದು, ಕೊಲ್ಕತ್ತಾ ಮೂಲದ ರಾಕಿಬ್ (22) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ.
ಆಸ್ಪತ್ರೆ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ವೇಳೆ ಹೊರ ಭಾಗದಲ್ಲಿ ಹಾಕಿದ್ದ ಸ್ಟೇಜ್ ನಿಂದ ಸುಮಾರು 30 ಅಡಿ ಎತ್ತರದಿಂದ ಸಿಮೆಂಟ್ ನೆಲಕ್ಕೆ ಕಾರ್ಮಿಕ ಬಿದ್ದಿದ್ದಾನೆ.
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನಿಸಿದ್ದಾರೆ.