ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಭೂಕುಸಿತ ಉಂಟಾಗಿರುವ ಘಟನೆ ವಿರಾಜಪೇಟೆ ಸಮೀಪದ ಪಾಲಂಗಾಲದಲ್ಲಿ ನಡೆದಿದೆ. ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿದ್ದು, ಸುತ್ತಮುತ್ತಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಮನೆಗಳಿಲ್ಲದಿರುವುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಆಗಸ್ಟ್‌ನಲ್ಲಿ ಮಳೆಯ ಪ್ರಮಾಣ ಹೆಚ್ಚಿರುವುದರಿಂದ ಸಮೀಪದ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ





