ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಡಿಕೇರಿ-ವಿರಾಜಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಬದಿ ಭೂಕುಸಿತವಾಗಿದೆ.
ಕಳೆದ ಕೆಲ ದಿನಗಳ ಹಿಂದೆಯೂ ಇಲ್ಲಿ ಭೂಕುಸಿತವಾಗಿತ್ತು. ಅಲ್ಲಿನ ಹೆಚ್ಚಿನ ಭೂಕುಸಿತವಾಗದಂತೆ ಸ್ಯಾಂಡ್‌ಬ್ಯಾಗ್ ಜೋಡಿಸಲಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿದೆ.
ರಸ್ತೆ ಕಡಿದಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನ ಸಂಚಾರದಿಂದ ಮತ್ತಷ್ಟು ಅಪಾಯ ಸಂಭವಿಸುವ ಸಾಧ್ಯತೆಯಿದೆ.
ಸ್ಥಳಕ್ಕಾಗಮಿಸಿದ ಪೊಲೀಸರು ರಸ್ತೆ ಬದಿ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬದಿಯಲ್ಲಿ ವಾಹನಗಳು ಸಂಚರಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.



