ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಭಾರೀ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದಾನೆ.
ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಹೆಚ್ಚಾಗುವ ಆತಂಕ ದೂರವಾಗಿದೆ. ನಿಧಾನಗತಿಯಲ್ಲಿ ಪ್ರವಾಹ ಇಳಿಮುಖವಾಗುತ್ತಿದ್ದು, ಜನಜೀವನ ಸಹಜ ಸ್ಥಿತಿಯತ್ತ ಮರಳಲು ಇನ್ನೆರಡು ದಿನ ಮಳೆ ಬಿಡುವು ನೀಡಬೇಕಿದೆ.
ಮಡಿಕೇರಿ, ಭಾಗಮಂಡಲ ಸೇರಿದಂತೆ ಅತಿ ಹೆಚ್ಚು ಮಳೆ ಬಿದ್ದ ಪ್ರದೇಶಗಳಲ್ಲಿ ಈಗ ಮಳೆಯ ಪ್ರಮಾಣ ಕಡಿಮೆಯಾಗಿದೆ. ಇನ್ನೆರಡು ದಿನಗಳ ಕಾಲ ಮಳೆ ಕಡಿಮೆಯಾದರಷ್ಟೇ ಪರಿಸ್ಥಿತಿ ಸಹಜ ಸ್ಥಿತಿ ಮರಳಲಿದೆ.
ಇನ್ನೂ ನಿನ್ನೆಯಿಂದ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಸ್ಥಿತಿ ನಿಧಾನವಾಗಿ ಕಡಿಮೆಯಾಗುತ್ತಿದ್ದು, ಜನರು ಕೊಂಚ ನಿರಾಳರಾಗಿದ್ದಾರೆ.
ಇನ್ನೂ ಈ ಬಗ್ಗೆ ಹವಾಮಾನ ಇಲಾಖೆಯು ಮಾಹಿತಿ ನೀಡಿದ್ದು, ಮುಂದಿನ ಐದು ದಿನ ಮಳೆ ಕಳೆದ ವಾರದಷ್ಟು ತೀವ್ರವಾಗಿರುವುದಿಲ್ಲ ಎಂದು ಹೇಳಿದೆ. ಹೀಗಾಗಿ ಜಿಲ್ಲೆಯ ಜನರು ನಿರಾಳರಾಗಿದ್ದು, ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.





