ವಿರಾಜಪೇಟೆ: ಇಲ್ಲಿನ ರೆಸಾರ್ಟ್ ಮಾಜಿ ನೌಕರರೊಬ್ಬರು ಸೂಸೈಡ್ ಮಾಡಿಕೊಳ್ಳುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ.
ಪ್ರವೀಣ ಅರವಿಂದ್ ಎಂಬುವವರೇ ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದು, ಪೊಲೀಸರು ಹಾಗೂ ರೆಸಾರ್ಟ್ ಮಾಲೀಕರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾರೆ.
ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದೇನೆ. ನನಗಾದ ಅನ್ಯಾಯ ಹಾಗೂ ಟಾರ್ಚರ್ ಸಹಿಸಲಾಗುತ್ತಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ಮನೆ ಕಟ್ಟಬಾರದ? ಕಾರು ತೆಗಿಬಾರದಾ? ತಮಿಳುನಾಡಿನಿಂದ ನನ್ನ ಹೆಂಡತಿ ಮಕ್ಕಳನ್ನು ಅರೆಸ್ಟ್ ಮಾಡಿ ಕರೆತರುತ್ತಿದ್ದಾರೆ. ರೆಸಾರ್ಟ್ ನಲ್ಲಿ ಬಾರಿ ಅಕ್ರಮಗಳಾಗಿದೆ. ರೆಸಾರ್ಟ್ ನಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯಲಾಗಿದೆ. ಅರಣ್ಯ ಭೂಮಿ ಅತಿಕ್ರಮಣವಾಗಿದೆ ಎಂದು ಲೈವ್‌ನಲ್ಲಿ ಗಂಭೀರ ಆರೋಪ ಮಾಡಿದ್ದು, ನನ್ನ ದೇಹ ತೆಗೆಯುವ ಮೊದಲು ಅವರು ಅರೆಸ್ಟ್ ಆಗಬೇಕು ಎಂದು ಆಗ್ರಹಿಸಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪ್ರವೀಣ್ ಲೋಕೇಶನ್ ಹುಡುಕುತ್ತಿದ್ದು, ಸಮಸ್ಯೆಗೆ ಪರಿಹಾರ ಹುಡುಕೋಣ. ಯಾವುದೇ ಕಾರಣಕ್ಕೂ ದುಡುಕಬೇಡಿ ಎಂದು ಕಮೆಂಟ್‌ನಲ್ಲಿ ಮನವಿ ಮಾಡಿದ್ದಾರೆ.