ಕೊಡಗು

ವಿರಾಜಪೇಟೆ| ರೆಸಾರ್ಟ್ ಮಾಜಿ ನೌಕರನಿಂದ ಲೈವ್ ಸೂಸೈಡ್ ಬೆದರಿಕೆಯ ವಿಡಿಯೋ: ಕಾರಣ ಇಷ್ಟೇ

ವಿರಾಜಪೇಟೆ: ಇಲ್ಲಿನ ರೆಸಾರ್ಟ್‌ ಮಾಜಿ ನೌಕರರೊಬ್ಬರು ಸೂಸೈಡ್‌ ಮಾಡಿಕೊಳ್ಳುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ.

ಪ್ರವೀಣ ಅರವಿಂದ್‌ ಎಂಬುವವರೇ ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದು, ಪೊಲೀಸರು ಹಾಗೂ ರೆಸಾರ್ಟ್‌ ಮಾಲೀಕರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾರೆ.

ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದೇನೆ. ನನಗಾದ ಅನ್ಯಾಯ ಹಾಗೂ ಟಾರ್ಚರ್ ಸಹಿಸಲಾಗುತ್ತಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ಮನೆ ಕಟ್ಟಬಾರದ? ಕಾರು ತೆಗಿಬಾರದಾ? ತಮಿಳುನಾಡಿನಿಂದ ನನ್ನ ಹೆಂಡತಿ ಮಕ್ಕಳನ್ನು ಅರೆಸ್ಟ್ ಮಾಡಿ ಕರೆತರುತ್ತಿದ್ದಾರೆ. ರೆಸಾರ್ಟ್ ನಲ್ಲಿ ಬಾರಿ ಅಕ್ರಮಗಳಾಗಿದೆ. ರೆಸಾರ್ಟ್ ನಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯಲಾಗಿದೆ. ಅರಣ್ಯ ಭೂಮಿ ಅತಿಕ್ರಮಣವಾಗಿದೆ ಎಂದು ಲೈವ್‌ನಲ್ಲಿ ಗಂಭೀರ ಆರೋಪ ಮಾಡಿದ್ದು, ನನ್ನ ದೇಹ ತೆಗೆಯುವ ಮೊದಲು ಅವರು ಅರೆಸ್ಟ್ ಆಗಬೇಕು ಎಂದು ಆಗ್ರಹಿಸಿದ್ದಾರೆ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪ್ರವೀಣ್‌ ಲೋಕೇಶನ್‌ ಹುಡುಕುತ್ತಿದ್ದು, ಸಮಸ್ಯೆಗೆ ಪರಿಹಾರ ಹುಡುಕೋಣ. ಯಾವುದೇ ಕಾರಣಕ್ಕೂ ದುಡುಕಬೇಡಿ ಎಂದು ಕಮೆಂಟ್‌ನಲ್ಲಿ ಮನವಿ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago