ಕೊಡಗು: ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ನಗರಸಭೆಗೆ ಭೇಟಿ ನೀಡಿದ ಅಧಿಕಾರಿಗಳು, ಕಚೇರಿಯಲ್ಲಿದ್ದ ಕಡತಗಳನ್ನು ಪರಿಶೀಲನೆ ನಡೆಸಿದರು.
ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಿಂದ ದೂರು ಬಂದ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಕಡತ ಹಾಗೂ ಇನ್ನಿತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಕಕ್ಕಾಬಿಕ್ಕಿಯಾದ ಘಟನೆ ನಡೆಯಿತು.





