ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಡಿ ಗ್ರೂಪ್ ನೌಕರ ಶರತ್ ಎಂಬಾತನೇ ಬಂಧಿತ ಆರೋಪಿ. ಮಡಿಕೇರಿಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಕಚೇರಿಯಲ್ಲಿ ಕೆಲಸ ಮಾಡುವ ಡಿ ಗ್ರೂಪ್ ನೌಕರ ಶರತ್ ಎಂಬಾತ ಕುಶಾಲನಗರ ಸಮೀಪ ವೀರಭೂಮಿ ಬಳಿ ತನ್ನ ಮನೆಯಲ್ಲಿ ಗುತ್ತಿಗೆದಾರ ಲೈಸೆನ್ಸ್ ನೀಡಲು ರಾಘವೇಂದ್ರ ಎಂಬುವರಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಸಿಕ್ಕಿಬಿದ್ದಿದ್ದಾನೆ. ಗುತ್ತಿಗೆದಾರ ಲೈಸೆನ್ಸ್ ನೀಡಲು ತನಗೆ 10 ಸಾವಿರ ಮತ್ತು ತನ್ನ ಕಚೇರಿಯಲ್ಲಿ ರೂ. 4 ಸಾವಿರ ಸೇರಿದಂತೆ ಒಟ್ಟು 14 ಸಾವಿರ ರೂಗಳಿಗೆ ಬೇಡಿಕೆ ಇಟ್ಟಿದ್ದ ಶರತ್, 10 ಸಾವಿರ ರೂಗಳನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…