Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬ್ರೇಕ್‌ ಫೇಲ್‌ ಆಗಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಲಾರಿ

ಕೊಡಗು: ಲಾರಿಯೊಂದು ಬ್ರೇಕ್‌ ಫೇಲ್‌ ಆಗಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.

ತಮಿಳುನಾಡಿನ ಲಾರಿ ಬ್ರೇಕ್‌ ಫೇಲ್‌ ಆದ ಪರಿಣಾಮ ಈ ಘಟನೆ ನಡೆದಿದ್ದು, ಆಟೋ ಚಾಲಕನ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಪದೇ ಪದೇ ಈ ಸ್ಥಳದಲ್ಲಿ ಅಪಘಾತ ನಡೆಯುತ್ತಿವೆ. ಇಲ್ಲಿ ಪೊಲೀಸರು ಬ್ಯಾರಿಕೇಡ್‌ ಹಾಕದೇ ಇರುವುದೇ ಇದಕ್ಕೆಲ್ಲಾ ಕಾರಣ ಎಂದು ಆರೋಪಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವಿರಾಜಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Tags: