ವಿರಾಜಪೇಟೆ: ಕೊಡಗು-ಕೇರಳ ಗಡಿಯ ಮಾಕುಟ್ಟ ಅರಣ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ತೆಲಂಗಾಣ ರಾಜ್ಯಕ್ಕೆ ಸೇರಿದ ಲಾರಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಾಕುಟ್ಟದ ರಸ್ತೆ ಬದಿಯ ಅಂಬುಜ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಲಾರಿಯಲ್ಲಿ ಸಿಲುಕ್ಕಿದ್ದವರನ್ನು ಸ್ಥಳೀಯರು ಹೊರ ತೆಗೆದಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.