Mysore
84
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ವಿರಾಜಪೇಟೆ| ಅಕ್ಕಿ ಲಾರಿಗೆ ಬೆಂಕಿ: ಸುಟ್ಟು ಕರಕಲು

ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ ನಡೆದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಲಾರಿ ಚಾಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ ತಿಳಿದು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದರೂ ಏನು ಪ್ರಯೋಜನವಾಗಲಿಲ್ಲ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:
error: Content is protected !!