ಮಡಿಕೇರಿ: ಒಕ್ಕಲಿಗ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾದ ದಲಿತ ಯುವತಿಯೊಬ್ಬಳು ಮೂರೇ ದಿನಕ್ಕೆ ಸಾವಿಗೀಡಾಗಿದ್ದಾಳೆ. ಪತಿ ಹಾಗೂ ಆತನ ಕುಟುಂಬದವರ ವಿರುದ್ಧ ಮೃತ ಪತ್ನಿಯ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸಮೀಪದ ೭ನೇ ಹೊಸಕೋಟೆ ಎಂಬಲ್ಲಿ ಈ ಘಟನೆ ನಡೆದಿದೆ. ಅಕ್ಷಿತಾ (೧೮) ಕೊಲೆಯಾದ ಯುವತಿ. ಮಂಗಳವಾರ ಸಂಜೆ ಅನುಮಾನಾಸ್ಪದವಾಗಿ ಸಾವು ಸಂಭವಿಸಿದೆ. ಅದೇ ಗ್ರಾಮದ ಹೇಮಂತ್ ಎಂಬ ಒಕ್ಕಲಿಗ ಯುವಕನನ್ನು ಈಕೆ ಪ್ರೀತಿಸಿ ಮದುವೆಯಾಗಿದ್ದಳು. ಮೂರು ದಿನಗಳ ಹಿಂದೆ ಇಬ್ಬರೂ ದೇವಾಲಯದಲ್ಲಿ ಮದುವೆಯಾಗಿ ಬಂದಿದ್ದರು. ಇದರಿಂದ ಹೇಮಂತ್‌ನ ಪೋಷಕರು ಅಸಮಾಧಾನಗೊಂಡಿದ್ದರು. ದಲಿತ ಯುವತಿ ತಮ್ಮ ಮಗನನ್ನು ಮದುವೆಯಾದುದು ಅವರಿಗೆ ಇಷ್ಟವಿರಲಿಲ್ಲ. ಆಕೆಯನ್ನು ಸಾಯಿಸಿಬಿಡುವುದಾಗಿ ಹೇಳಿದ್ದರು ಎಂದು ಅಕ್ಷಿತಾ ಕುಟುಂಬಸ್ಥರು ಆರೋಪಿಸಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…