ಕೊಡಗು

ಮಾರ್ಚ್.‌3ರಂದು ಚಂದ್ರಗ್ರಹಣ: ದೇವಾಲಯ ದರ್ಶನ ಸಮಯ ಬದಲು

ಕೊಡಗು: ಮಾರ್ಚ್.‌3ರಂದು ಈ ವರ್ಷದ ಮೊದಲ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ.

ಆಗಸದಲ್ಲಿ ನಡೆಯಲಿರುವ ಅಪರೂಪದ ವಿದ್ಯಾಮಾನ ಇದಾಗಿದ್ದು, ಈ ಗ್ರಹಣದ ಹಿನ್ನೆಲೆಯಲ್ಲಿ ವಿವಿಧ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಚಂದ್ರಗ್ರಹಣವು ವರ್ಷದ ಅತ್ಯಂತ ದೀರ್ಘವಾದ ಗ್ರಹಣವಾಗಿದೆ. ಮಾರ್ಚ್.‌3ರ ಮಂಗಳವಾರ ಮಧ್ಯಾಹ್ನ 3.20ಕ್ಕೆ ಚಂದ್ರಗ್ರಹಣ ಆರಂಭವಾಗಲಿದೆ. ಸಂಜೆ 6.47ಕ್ಕೆ ಕೊನೆಗೊಳ್ಳಲಿದೆ. ಈ ಚಂದ್ರಗ್ರಹಣದ ಅವಧಿ 3 ಗಂಟೆ 27 ನಿಮಿಷಗಳು.

ಚಂದ್ರಗ್ರಹಣದ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 9ರಿಂದ ರಾತ್ರಿ 7.15ರವರೆಗೆ ಸಾರ್ವಜನಿಕರಿಗೆ ದೇವರ ದರ್ಶನ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಈ ದಿನದಿಂದ ಯಾವುದೇ ಪಿಂಡಪ್ರಧಾನ, ಪಿತೃ ಕಾರ್ಯಗಳು, ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಭಕ್ತಾದಿಗಳಿಗೆ ಅನ್ನದಾಸೋಹ ಇರುವುದಿಲ್ಲ. ಅಂತೆಯೇ ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಿಗ್ಗೆ 9ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಇರುವುದಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

4 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

4 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

4 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

4 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

5 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

5 hours ago