ಮಡಿಕೇರಿ: ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗಿದೆ. ಇತ್ತೀಚಿಗೆ ಸುರಿದ ಮಹಾಮಳೆಗೆ ಜಿಲ್ಲೆಯ ಜನರು ಹೈರಾಣಗಿದ್ದರು. ಮಳೆ ಆರ್ಭಟದಿಂದ ನೊಂದ ಜನರು ಚೇತರಿಸಿಕೊಳ್ಳುವ ಮುನ್ನವೇ ಕಾಡಾನೆಗಳ ಹಾವಳಿ ಹೆಚ್ಚಾಗಿದೆ.
ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ 72ವರ್ಷದ ಕಾತಯಿ ಎಂಬ ಮಹಿಳೆ ಬೆಳ್ಳಂಬೆಳಿಗ್ಗೆಯೇ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಮನೆಯಿಂದ ಹೊರಬರುತ್ತಿದಂತೆ ಕಾಡಾನೆಯು ದಾಳಿ ಮಾಡಿ ಬಲಿ ತೆಗೆದುಕೊಂಡಿದೆ.
ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಾಮಾಯಿಸಿದರು. ಈ ವೇಳೆ ಸ್ಥಳೀಯರು ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟುವಲ್ಲಿ ವಿಫಲವಾಗಿರುವುದನ್ನು ವಿರೋಧಿಸಿ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರು.
ಜಿಲ್ಲೆಯಲ್ಲಿ ಹೆಚ್ಚಿದ ಕಾಡಾನೆ ಉಪಟಳ
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಾನವ ಕಾಡುಪ್ರಾಣಿಗಳ ಸಂಘರ್ಷ ಹೆಚ್ಚುತ್ತಿದೆ. ಆಗಸ್ಟ್ ತಿಂಗಳಲ್ಲೆ ಮಾನವನ ಮೇಲೆ ಐದಾರು ಕಾಡಾನೆ ದಾಳಿ ನಡೆದಿದೆ. ಮೊನ್ನೆ ತಾನೆ ಕಾಡಾನೆಗಳು ಪೊನ್ನಂಪೇಟೆಯಲ್ಲಿ ಮಧ್ಯರಾತ್ರಿಯಲ್ಲಿ ಊರಿನ ಒಳಗೆ ನುಗ್ಗಿ ಸ್ಥಳೀಯರನ್ನು ಗಾಬರಿಗೊಳಿಸಿದ್ದವು.





