Categories: ಕೊಡಗು

ಮಡಿಕೇರಿ: ಸರ್ಕಾರಿ ಬಸ್‌-ಬೈಕ್‌ ನಡುವೆ ಅಪಘಾತ

ಮಡಿಕೇರಿ: ರಾಜ್ಯ ಸಾರಿ ಸಂಸ್ಥೆ ಬಸ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿರಾಜಪೇಟೆ ತಾಲೂಕು ಬಿಟ್ಟಂಗಲ ಜಂಕ್ಷನ್‌ ಬಳಿ ಮಂಗಳವಾರ ನಡೆದಿದೆ.

ಬೈಕ್ ಸವಾರನ ಕಾಲು ಮುರಿತಕ್ಕೆ ಒಳಗಾಗಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾರ್ವಜನಿಕರು ಬೈಕ್ ಸವಾರನನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿರಾಜಪೇಟೆಯಿಂದ ಹುಣಸೂರಿಗೆ ತೆರಳುತ್ತಿದ್ದ ಸರಕಾರಿ ಬಸ್ಸಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಇದೇ ಸಂದರ್ಭ ಕೆಲವರು ಬಸ್ ಚಾಲಕನ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ ಎಂದು  ತಿಳಿದು ಬಂದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

9 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

24 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago

ಓದುಗರ ಪತ್ರ: ನಾರಾಯಣಸ್ವಾಮಿಯವರು ಜವಾಬ್ದಾರಿಯುತವಾಗಿ ವರ್ತಿಸಲಿ

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…

4 hours ago

ಲಿಂಗ ಸಮಾನತೆ ಬರಿ ಆದರ್ಶವಲ್ಲ , ಸಾಧಿಸಬೇಕಾದ ಗುರಿ

ಪ್ರೊ.ಆರ್.ಎಂ.ಚಿಂತಾಮಣಿ ಇತ್ತೀಚೆಗೆ ಕೇಂದ್ರ ಸರ್ಕಾರದ ಹಿರಿಯ ಕಾರ್ಯದರ್ಶಿ ದರ್ಜೆಯ ಅಧಿಕಾರಿಯೊಬ್ಬರು ಒಂದು ವಿಚಾರಸಂಕಿರಣದಲ್ಲಿ ‘೨೦೪೭ರ ಹೊತ್ತಿಗೆ ವಿಕಸಿತ ಭಾರತವಾಗಬೇಕಾದರೆ ಮಹಿಳೆಯರಲ್ಲಿ…

4 hours ago