Application Information Employment Concept
ಮಡಿಕೇರಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಅರ್ಹ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಅಪ್ರೆಂಟಿಸ್ ಗೆ ಮಾಹೆಯಾನ 15ಸಾವಿರ ರೂಗಳ ಶಿಷ್ಯವೇತನ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.
ಅಭ್ಯರ್ಥಿಗಳು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರತಕ್ಕದ್ದು, ಕಂಪ್ಯೂಟರ್ ಜ್ಞಾನ, ಕನ್ನಡ ಭಾಷೆಯ ಪ್ರಬುದ್ಧತೆ ಇರಬೇಕು. 2025ರ ಜನವರಿಯಿಂದ ಡಿಸೆಂಬರ್ 31 ರವರೆಗೆ (12 ತಿಂಗಳು) ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿ ಇದಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 04 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…