ಮಡಿಕೇರಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ – ಮಡಿಕೇರಿ ಮಾರ್ಗಮಧ್ಯದ ಬೋಯಿಕೇರಿಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 12.30ರ ಸಮಯದಲ್ಲಿ ಸುಂಟಿಕೊಪ್ಪದಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕೇರಳದ ಕಾಸರಗೋಡುವಿನಿಂದ ತಮಿಳುನಾಡಿನ ಊಟಿಗೆ ತೆರಳುತ್ತಿದ್ದ ರಿಟ್ಜ್ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ತೀವ್ರ ಗಾಯವಾಗಿದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ರಸ್ತೆಯ ಮಧ್ಯದಲ್ಲಿಯೇ ಅವಘಡ ಸಂಭವಿಸಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ ಕೆಲಕಾಲ ಹೆದ್ದಾರಿ ಬಂದ್ ಆಗಿತ್ತು.