ಕೊಡಗು

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.

ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಬಸ್ ನಿಲ್ದಾಣದಲ್ಲೇ ಮುಂಭಾಗದಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ಮುಂಬದಿ ಯಾರೂ ಪ್ರಯಾಣಿಕರು ಇಲ್ಲದರಿಂದ ಅನಾಹುತ ತಪ್ಪಿದೆ. ಜೊತೆಗೆ ಕಂಬ ಇಲ್ಲದೇ ಹೋಗಿದ್ದರೆ ಇತರ ಬಸ್‌ಗೆ ಕಾಯುತ್ತಿದ್ದ ಮತ್ತು ನಿಲ್ದಾಣದಲ್ಲಿ ಕುಳಿತಿದ್ದ ಹತ್ತಾರು ಪ್ರಯಾಣಿಕರ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಸದ್ಯ ಕಂಬ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಬಸ್‌ನ ಬ್ರೇಕ್ ವಿಫಲಗೊಂಡಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಯಿಂದ ಬಸ್‌ನ ಮುಂಬದಿ ಜಖಂಗೊಂಡಿದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

34 mins ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

2 hours ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

4 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

4 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

4 hours ago