ಮಡಿಕೇರಿ: ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು (ಮಾ.22) ರಾತ್ರಿ 9 ಗಂಟೆ ಸಮಯದಲ್ಲಿ ಕುಶಾಲನಗರ ಮಲ್ಟಿ ಫ್ಲೆಕ್ಸ್ ಥಿಯೇಟರ್ ಬಳಿ ನಡೆದಿದೆ.
ಗೊಂದಿಬಸವನಹಳ್ಳಿಯ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಸುಂಟಿಕೊಪ್ಪ ಕಡೆಯಿಂದ ಧಾವಿಸಿ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಇವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.