Mysore
15
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಮಡಿಕೇರಿ-ಗೋಣಿಕೊಪ್ಪ ದಸರಾದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಡಿಕೇರಿ: ಅಕ್ಟೋಬರ್.‌12ರಂದು ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ.

ವಿಜಯದಶಮಿ ದಿನ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನಡೆಯಲು ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಮಾಹಿತಿ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಸರ್ಪಗಾವಲು ಇರಲಿದೆ ಎಂದು ಹೇಳಿದ್ದಾರೆ.

ಇನ್ನು ಕಳೆದ ಬಾರಿ ನಡೆದ ಸಣ್ಣಪುಟ್ಟ ಲೋಪಗಳನ್ನು ಈ ಬಾರಿ ಸರಿಪಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ.

ಮಂಜಿನ ನಗರಿ ಮಡಿಕೇರಿ ದಸರಾಗೆ 1.5 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದ್ದು, ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ.

ಇನ್ನು ಗೋಣಿಕೊಪ್ಪ ದಸರಾದಲ್ಲಿ ಹೆಚ್ಚು ಜನ ಸೇರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ನಿಯಂತ್ರಣ ಮಾಡಲಾಗುವುದು. ಈ ವ್ಯವಸ್ಥೆಯ ಬದಲಾವಣೆಗಾಗಿ 11 ಕಡೆಗಳಲ್ಲಿ ಚೆಕ್‌ಪೋಸ್ಟ್‌ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆಯಾಯ ಕಟ್ಟುನಿಟ್ಟಿನ ಸ್ಥಳಗಳಲ್ಲಿ ಪೊಲೀಸರು ಗಸ್ತು ತಿರುಗಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Tags:
error: Content is protected !!