ಮಡಿಕೇರಿ: ಅಕ್ಟೋಬರ್.12ರಂದು ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ.
ವಿಜಯದಶಮಿ ದಿನ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನಡೆಯಲು ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸರ್ಪಗಾವಲು ಇರಲಿದೆ ಎಂದು ಹೇಳಿದ್ದಾರೆ.
ಇನ್ನು ಕಳೆದ ಬಾರಿ ನಡೆದ ಸಣ್ಣಪುಟ್ಟ ಲೋಪಗಳನ್ನು ಈ ಬಾರಿ ಸರಿಪಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ.
ಮಂಜಿನ ನಗರಿ ಮಡಿಕೇರಿ ದಸರಾಗೆ 1.5 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದ್ದು, ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ.
ಇನ್ನು ಗೋಣಿಕೊಪ್ಪ ದಸರಾದಲ್ಲಿ ಹೆಚ್ಚು ಜನ ಸೇರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ನಿಯಂತ್ರಣ ಮಾಡಲಾಗುವುದು. ಈ ವ್ಯವಸ್ಥೆಯ ಬದಲಾವಣೆಗಾಗಿ 11 ಕಡೆಗಳಲ್ಲಿ ಚೆಕ್‌ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆಯಾಯ ಕಟ್ಟುನಿಟ್ಟಿನ ಸ್ಥಳಗಳಲ್ಲಿ ಪೊಲೀಸರು ಗಸ್ತು ತಿರುಗಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…