ಮಡಿಕೇರಿ: ಅಕ್ಟೋಬರ್.4ರಿಂದ 12ರವರೆಗೆ ಮಡಿಕೇರಿ ದಸರಾ ನಡೆಯಲಿದ್ದು, ಕಾರ್ಯಕ್ರಮಗಳಿಗೆ ಭಾಗವಹಿಸಲು ಕಲಾವಿದರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅಕ್ಟೋಬರ್.4 ರಿಂದ 12ರವರೆಗೆ ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕಲಾವಿದರು, ಕಲಾತಂಡಗಳು ಸೆಪ್ಟೆಂಬರ್ 2ರ ಒಳಗಾಗಿ ಅರ್ಜಿ ಮಾಹಿತಿಯನ್ನು ಮೇಲ್ ಮಾಡುವಂತೆ ಸೂಚಿಸಲಾಗಿದೆ.
ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಶೀಲಿಸಲಾಗುವುದಿಲ್ಲ ಎಂದು ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ ತಿಳಿಸಿದ್ದಾರೆ.
ಮಹಿಳಾ ದಸರಾ, ಮಕ್ಕಳ ದಸರಾ, ಜಾನಪದ ದಸರಾಗಳಿಗೆ ಕಾರ್ಯಕ್ರಮ ನೀಡುವವರು ಅರ್ಜಿಯಲ್ಲಿ ಈ ಬಗ್ಗೆ ನಮೂದಿಸಬೇಕು. ಒಂದು ಕಲಾತಂಡಕ್ಕೆ ಒಂದು ಪ್ರದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಸೋಲೋ ನೃತ್ಯ ಹಾಗೂ ಸೋಲೋ ಹಾಡಿಗೆ ಅವಕಾಶವಿಲ್ಲ. ನೃತ್ಯತಂಡದಲ್ಲಿ ಕನಿಷ್ಠ 4 ಮಂದಿ ಇರಬೇಕು. ಕಲಾವಿದರ ಆಯ್ಕೆಯ ಅಂತಿಮ ತೀರ್ಮಾನ ದಸರಾ ಸಾಂಸ್ಕೃತಿಕ ಸಮಿತಿಯದ್ದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…