Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಡಿಕೇರಿ | ಬೀದಿ ನಾಯಿಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ : ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣದ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾತನಾಡಿದರು. ಬೀದಿನಾಯಿಗಳನ್ನು ಸ್ಥಳಾಂತರಿಸಲು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ) ಕನಿಷ್ಠ ೧ ಎಕರೆ ಜಾಗವನ್ನು ಕಾಯ್ದಿರಿಸಿ ಸುತ್ತುಗೋಡೆ ನಿರ್ಮಿಸಬೇಕೆಂದು ನಿರ್ದೇಶನ ನೀಡಿದರು.

ನಗರಾಭಿವೃದ್ದಿ, ಪಂಚಾಯತ್ ರಾಜ್, ಪಶುಪಾಲನೆ ಹಾಗೂ ಪಶು ವೈದ್ಯಕೀಯ, ಶಿಕ್ಷಣ, ಸಾರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಯುವ ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮವಹಿಸಬೇಕು. ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣ ಸೇರಿದಂತೆ ಎಲ್ಲೆಡೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದರು.

ಬೀದಿನಾಯಿಗಳನ್ನು ಸ್ಥಳಾಂತರಿಸಲು ಕ್ರಮವಹಿಸಬೇಕು,ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು, ಬೀದಿನಾಯಿಗಳ ಹಾವಳಿ ನಿಯಂತ್ರಣ ದ ಬಗ್ಗೆ ಆಗಾಗ್ಗೆ ಪರಿಶೀಲಿಸಬೇಕು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರೇಬಿಸ್ ನಿರೋಧಕ ಲಸಿಕೆ ಮತ್ತು ರೇಬಿಸ್ ಇಮ್ಯುನೊಗ್ಲೋಬ್ಯುಲಿನ್ ಚುಚ್ಚುಮದ್ದಿನ ದಾಸ್ತಾನು ಇರಿಸಿಕೊಳ್ಳಬೇಕು. ನಾಯಿ ಕಡಿತಕ್ಕೆ ಒಳಗಾದವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೇಳಿದರು.

ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ, ಬೀದಿನಾಯಿಗಳ ಹಾವಳಿ ನಿಯಂತ್ರಣ ಸಂಬಂಧ ಸ್ಥಳೀಯ ಸಂಸ್ಥೆಗಳ ಜೊತೆ ಕೈಜೋಡಿಸಿ, ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ವಿಭಾಗಾಽಕಾರಿ ನಿತಿನ್ ಚಕ್ಕಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಭೂ ದಾಖಲೆಗಳ ಉಪ ನಿರ್ದೇಶಕ ನಿರಂಜನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಿದಾನಂದ ಕುಮಾರ್ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

Tags:
error: Content is protected !!