ಕೊಡಗು

ಮಡಿಕೇರಿ | ಬೀದಿ ನಾಯಿಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ : ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣದ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾತನಾಡಿದರು. ಬೀದಿನಾಯಿಗಳನ್ನು ಸ್ಥಳಾಂತರಿಸಲು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ) ಕನಿಷ್ಠ ೧ ಎಕರೆ ಜಾಗವನ್ನು ಕಾಯ್ದಿರಿಸಿ ಸುತ್ತುಗೋಡೆ ನಿರ್ಮಿಸಬೇಕೆಂದು ನಿರ್ದೇಶನ ನೀಡಿದರು.

ನಗರಾಭಿವೃದ್ದಿ, ಪಂಚಾಯತ್ ರಾಜ್, ಪಶುಪಾಲನೆ ಹಾಗೂ ಪಶು ವೈದ್ಯಕೀಯ, ಶಿಕ್ಷಣ, ಸಾರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಯುವ ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮವಹಿಸಬೇಕು. ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣ ಸೇರಿದಂತೆ ಎಲ್ಲೆಡೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದರು.

ಬೀದಿನಾಯಿಗಳನ್ನು ಸ್ಥಳಾಂತರಿಸಲು ಕ್ರಮವಹಿಸಬೇಕು,ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು, ಬೀದಿನಾಯಿಗಳ ಹಾವಳಿ ನಿಯಂತ್ರಣ ದ ಬಗ್ಗೆ ಆಗಾಗ್ಗೆ ಪರಿಶೀಲಿಸಬೇಕು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರೇಬಿಸ್ ನಿರೋಧಕ ಲಸಿಕೆ ಮತ್ತು ರೇಬಿಸ್ ಇಮ್ಯುನೊಗ್ಲೋಬ್ಯುಲಿನ್ ಚುಚ್ಚುಮದ್ದಿನ ದಾಸ್ತಾನು ಇರಿಸಿಕೊಳ್ಳಬೇಕು. ನಾಯಿ ಕಡಿತಕ್ಕೆ ಒಳಗಾದವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೇಳಿದರು.

ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ, ಬೀದಿನಾಯಿಗಳ ಹಾವಳಿ ನಿಯಂತ್ರಣ ಸಂಬಂಧ ಸ್ಥಳೀಯ ಸಂಸ್ಥೆಗಳ ಜೊತೆ ಕೈಜೋಡಿಸಿ, ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ವಿಭಾಗಾಽಕಾರಿ ನಿತಿನ್ ಚಕ್ಕಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಭೂ ದಾಖಲೆಗಳ ಉಪ ನಿರ್ದೇಶಕ ನಿರಂಜನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಿದಾನಂದ ಕುಮಾರ್ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕೋಲ್ಕತ್ತಾ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್‌ಬಗಾನ್‌ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…

13 hours ago

ಪಾಣಾಜೆಯಲ್ಲಿ ಅತ್ಯಧಿಕ ಮಳೆ: 16.7 ಸೆಂಟಿಮೀಟರ್ ದಾಖಲು!

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…

13 hours ago

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

16 hours ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

16 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

16 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

18 hours ago