ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ.
ಸಿ ಎನ್ ನಾಣಯ್ಯ (70) ಎಂಬುವವರೇ ಕೊಲೆಯಾದ ವ್ಯಕ್ತಿ. ನಿನ್ನೆ(ಗುರುವಾರ) ರಾತ್ರಿ 11:45 ಸಮಯದಲ್ಲಿ ಇಬ್ಬರ ನಡುವೆ ಜಗಳ ನಡೆದು ಸಿ. ದೀಪು(45) ದೊಣ್ಣೆಯಿಂದ ಹೊಡೆದು ತಂದೆಯನ್ನು ಕೊಲೆ ಮಾಡಿ ತಲೆಮೆರೆಸಿಕೊಂಡಿರುವ ಆರೋಪವಿದೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಶ್ರೀಮಂಗಲ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆರೋಪಿ ದೀಪುವಿಗಾಗಿ ಶೋಧ ಕಾರ್ಯ ನಡೆದಿದೆ.