ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ಮಕ್ಕಳಿಗೆ ಆಕರ್ಷಣೀಯವಾಗುವ ನಿಟ್ಟಿನಲ್ಲಿ ವಿವಿಧ ಕಲಾಕೃತಿಗಳ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಜೊತೆಗೆ ಗಾಂಧಿ ಮೈದಾನದಲ್ಲಿ ವಸ್ತುಪ್ರದರ್ಶನವೂ ನಡೆಯಲಿದೆ.
ಸಮವಸ್ತ್ರದಲ್ಲಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ವಯಸ್ಕರಿಗೆ 20 ರೂ. ಪ್ರವೇಶ ಶುಲ್ಕ ನಿಗದಿಮಾಡಲಾಗಿದೆ. ಫಲಪುಷ್ಪ ಪ್ರದರ್ಶನಗಳಂದು ಬೆಳಗ್ಗೆ 8 ರಿಂದ ರಾತ್ರಿ 8.30 ಗಂಟೆವರೆಗೆ ವೀಕ್ಷಣೆ ಮಾಡಬಹುದಾಗಿದೆ.
ಈ ಬಾರಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯುತ್ತಿರುವುದು ವಿಶೇಷವಾಗಿದೆ. ಫಲಪುಷ್ಪ ಪ್ರದರ್ಶನಕ್ಕೆ ಕಳೆದ ಬಾರಿ 32 ಲಕ್ಷ ರೂ. ವೆಚ್ಚವಾಗಿದ್ದು, ಈ ವರ್ಷದಲ್ಲಿ 35 ಲಕ್ಷ ರೂ. ಅಂದಾಜು ಮಾಡಲಾಗಿದೆ. ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯಿಂದ ರಾಜ್ಯದಲ್ಲಿ ಉತ್ಪತ್ತಿಯಾಗುವ ಜೇನುತುಪ್ಪವನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿಗೊಳಿಸಿ ಮಾರಾಟ ಮಾಡುವ ಉದ್ದೇಶದಿಂದ “ಝೇಂಕಾರ (JHENKARA)” ಬ್ರಾಂಡ್ ಅಡಿಯಲ್ಲಿ ನೊಂದಾಯಿಸಲ್ಪಟಿದ್ದು, “ಝೇಂಕಾರ ಬ್ರಾಂಡ್ ಹಾಗೂ ಕೊಡಗು ಜೇನಿನ “ಕೂರ್ಗ್ ಹನಿ” ಮಾರಾಟ ಬ್ರ್ಯಾಂಡ್ ಗಳ ವಿವಿಧ ಕಲಾಕೃತಿಗಳನ್ನು ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.
ಮತ್ತಷ್ಟು ಮಾಹಿತಿ: ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ, 24 ರ ಇಂದ 27 ರವರೆಗೆ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಿರುತ್ತದೆ.
ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 7,000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‍ಗಳಲ್ಲಿ ಸುಮಾರು 20,000 ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.
ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿಯನ್ನು 22 ಅಡಿ ಎತ್ತರದಲ್ಲಿ 30 ಅಡಿ ಉದ್ದ, 38 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.
ಹೂ ಹಾಗೂ ಜೇನು ಹುಳುವಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರದ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.
ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆಯ ಪ್ರದರ್ಶನಗಳನ್ನು ಏರ್ಪಾಡಿಸಲಾಗುತ್ತಿದೆ. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8 ರಿಂದ 10 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…