ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ.
ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37) ಮತ್ತು ಅಯ್ಯಂಗೇರಿ ಗ್ರಾಮದ ಪಿ.ಕೆ. ಆಸ್ಕರ್ (24) ಎಂಬುವವರೇ ಪೊಲೀಸರು ಬೀಸಿದ ಬಲೆಗೆ ಬಿದ್ದಿರುವ ಆರೋಪಿಗಳಾಗಿದ್ದಾರೆ. ಇವರಿಂದ 1 ಕೆ.ಜಿ. 151 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಮಾರ್ಚ್ 18ರಂದು ಅಯ್ಯಂಗೇರಿ – ನಾಪೋಕ್ಲು ರಸ್ತೆಯಲ್ಲಿ ಗಾಂಜಾ ಮಾರಾಟ / ಸರಬರಾಜು ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದೆ. ಮಡಿಕೇರಿ ಡಿಎಸ್ಪಿ ಪಿ.ಎ. ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ2ರಾದ (ಪ್ರಭಾರ) ಪಿ. ಅನೂಪ್ ಮಾದಪ್ಪ, ಭಾಗಮಂಡಲ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಶೋಭಾ ಲಮಾಣಿ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಎಸ್ಪಿ ಶ್ಲಾಘನೆ:
ಈ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಪಕ ಕೆ.ರಾಮರಾಜನ್ ಆವರು ಶ್ಲಾಘಿಸಿದ್ದಾರೆ.
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…
ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…
ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…