ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಕಾಫಿ ದಸರಾವನ್ನು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಉದ್ಘಾಟಿಸಿದರು.
ಇಲ್ಲಿನ ಗಾಂಧಿ ಮೈದಾನದಲ್ಲಿ ಮಡಿಕೇರಿ ದಸರಾ ಜನೋತ್ಸವ ಅಂಗವಾಗಿ ವಿನೂತನವಾಗಿ ಆಯೋಜಿಸಿರುವ ಕಾಫಿ ದಸರಾವು ಜನಮನ್ನಣೆ ಗಳಿಸುತ್ತಿದೆ.
ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, 9 ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ. ಈಗಾಗಲೇ 32 ಮಳಿಗೆಗಳು ಭರ್ತಿಯಾಗಿದ್ದು, ಕಾಫಿ, ಹೈನುಗಾರಿಕೆ, ಬಿದಿರು, ತೋಟಗಾರಿಕಾ ಬೆಳೆಗಳು, ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಈ ಮಳಿಗೆಗಳಲ್ಲಿ ದೊರಕಲಿದೆ.