ಮಡಿಕೇರಿ: ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮಡಿಕೇರಿ ತಾಲೂಕಿನ ಜನತಾ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಬಿ.ಬಿ. ಸುಜಾತ ಎಂಬುವವರಿಗೆ ಸೇರಿದ ಮನೆ ಪೂರ್ತಿ ಕುಸಿತಕ್ಕೊಳಗಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಬಿ.ಬಿ ಸುಜಾತ(58)ಎಂಬುವವರು ಈ ಮನೆಯಲ್ಲಿ ವಾಸವಿದ್ದು, ಅನಾರೋಗ್ಯ ಕಾರಣ ಕಳೆದ ವಾರಗಳಿಂದ ತನ್ನ ಮಗಳ ಮನೆಗೆ ಹೋಗಿದ್ದರು. ಈ ವೇಳೆ ಮನೆ ಕುಸಿದಿದ್ದು, ಮನೆಯ ಸಾಮಾಗ್ರಿಗಳೆಲ್ಲವೂ ನಾಶವಾಗಿವೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆ ಕುಸಿತಕ್ಕೊಳಗಾಗಿರುವುದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಸ್ಥಳಕ್ಕೆ ಕಂದಾಯ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಈ ವೇಳೆ ಸಂತ್ರಸ್ಥೆ ಸರ್ಕಾರದಿಂದ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…