Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮಡಿಕೇರಿ | ಮನೆಗಳವು ಮಾಡಿದ್ದ ಖದೀಮರು ಬಂಧನ

ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಎನ್.ಸಿದ್ದಲಿಂಗ (28) ಮತ್ತು ಎನ್.ರಘು (26) ಬಂಧಿತ ಆರೋಪಿಗಳು.

ನ.5ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಎಂ.ಚೆಂಬು ಗ್ರಾಮದ ನಿವಾಸಿ ಪಿ.ಪಿ. ವೀರಪ್ಪ ಅವರ ಮನೆಯ ರೂಮಿನಲ್ಲಿದ್ದ ಗಾಡ್ರೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ 15,000 ರೂ. ನಗದು ಮತ್ತು 120 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಶಬರಿಮಲೆಯಲ್ಲಿ ಚಿನ್ನ ಕಳ್ಳತನ ಪ್ರಕರಣ: ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್‌ ಕುಮಾರ್‌ ಬಂಧನ

ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಡಿಕೇರಿ ಉಪವಿಭಾಗ ಡಿಎಸ್‌ಪಿ ಪಿ.ಎ.ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಹೆಚ್.ವಿ. ಚಂದ್ರಶೇಖರ್, ಸಿದ್ದಾಪುರ ಪೊಲೀಸ್ ಠಾಣೆ ಪಿಎಸ್‌ಐ ಮಂಜುನಾಥ್ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ಮಾಹಿತಿ ಸಂಗ್ರಹಿಸಿ ನ.10ರಂದು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 8,50,000 ರೂ. ನಗದು ಮತ್ತು 120 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಬಿ.ಪಿ.ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.

Tags:
error: Content is protected !!