ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಎನ್.ಸಿದ್ದಲಿಂಗ (28) ಮತ್ತು ಎನ್.ರಘು (26) ಬಂಧಿತ ಆರೋಪಿಗಳು.
ನ.5ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಎಂ.ಚೆಂಬು ಗ್ರಾಮದ ನಿವಾಸಿ ಪಿ.ಪಿ. ವೀರಪ್ಪ ಅವರ ಮನೆಯ ರೂಮಿನಲ್ಲಿದ್ದ ಗಾಡ್ರೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ 15,000 ರೂ. ನಗದು ಮತ್ತು 120 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನು ಓದಿ: ಶಬರಿಮಲೆಯಲ್ಲಿ ಚಿನ್ನ ಕಳ್ಳತನ ಪ್ರಕರಣ: ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಬಂಧನ
ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಡಿಕೇರಿ ಉಪವಿಭಾಗ ಡಿಎಸ್‌ಪಿ ಪಿ.ಎ.ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಹೆಚ್.ವಿ. ಚಂದ್ರಶೇಖರ್, ಸಿದ್ದಾಪುರ ಪೊಲೀಸ್ ಠಾಣೆ ಪಿಎಸ್‌ಐ ಮಂಜುನಾಥ್ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ಮಾಹಿತಿ ಸಂಗ್ರಹಿಸಿ ನ.10ರಂದು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 8,50,000 ರೂ. ನಗದು ಮತ್ತು 120 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಬಿ.ಪಿ.ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…