ಕೊಡಗು

ಮಡಿಕೇರಿ| ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲಿದ್ದಾಗಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ.

ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಕಳೆದ ಕೆಲ ದಿನಗಳ ಹಿಂದೆ ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಬಳಿಕ ಪತ್ನಿ ಜ್ಯೋತಿ ತವರಿಗೆ ತೆರಳಿದ್ದಳು. ಜೈಲಿನಿಂದ ವಾಪಸ್‌ ಆದ ಕೀರ್ತನ್‌ ಪತ್ನಿಯನ್ನು ಕರೆತರಲು ಹೋಗಿದ್ದನು. ಆದರೆ ಪತ್ನಿ ಜ್ಯೋತಿ ಆತನ ಜೊತೆ ವಾಪಸ್‌ ಬರಲು ಒಪ್ಪಲಿಲ್ಲ.

ಇದರಿಂದ ಮನನೊಂದ ಕೀರ್ತನ್‌ ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

6 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

19 mins ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

53 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

56 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

1 hour ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

2 hours ago