Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮಡಿಕೇರಿಗೆ ಮತ್ತೊಂದು ಗರಿ: ದೇಶದಲ್ಲೇ ಅತ್ಯಂತ ಶುದ್ಧಗಾಳಿ ಇರೋದು ಮಡಿಕೇರಿಯಲ್ಲಿ

ಮಡಿಕೇರಿ: ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆ ದೇಶದಲ್ಲೇ ಅತ್ಯಂತ ಶುದ್ಧಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ.

ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದೆ. ಈ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ ಭಾರೀ ಖುಷಿ ಕೊಟ್ಟಿದೆ.

ಕೇಂದ್ರ ಪರಿಸರ ಮಾಲಿನ್ಯ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದ್ದು, ಈ ಪಟ್ಟಿಯಲ್ಲಿ ಗದಗ ಜಿಲ್ಲೆ ಕೂಡ ಸ್ಥಾನ ಪಡೆದುಕೊಂಡಿದೆ. ಗದಗ 8ನೇ ಸ್ಥಾನ ಪಡೆದುಕೊಂಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಷಪೂರಿತ ಗಾಳಿ ಸೇವನೆಯಿಂದ ಅಲ್ಲಿನ ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಈ ಬೆನ್ನಲ್ಲೇ ಕರ್ನಾಟಕದ ಕಾಶ್ಮೀರ ಎಂದು ಹೆಸರಾಗಿರುವ ಕೊಡಗು ಜಿಲ್ಲೆಗೆ ಶುದ್ಧಗಾಳಿ ಹೊಂದಿರುವ ಪಟ್ಟ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಕಾಲ ಸಾಲು ಸಾಲು ರಜೆ ಸಿಕ್ಕರೆ ಸಾಕು ಜನತೆ ಮೊದಲು ಕೊಡಗು ಪ್ರವಾಸಿ ತಾಣಗಳ ಮೇಲೆ ಕಣ್ಣಿಡಲಿದ್ದಾರೆ.

Tags:
error: Content is protected !!