ಮಡಿಕೇರಿ: ಮಡಿಕೇರಿಯಿಂದ ಹೆಬ್ಬೆಟ್ಟಗೇರಿ ದೇವಸ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಶುಕ್ರವಾರ ನಡೆದಿದೆ.
ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಘಟನೆಯ ವಿವರವನ್ನು ಪಡೆದುಕೊಂಡು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡುವ ಭರವಸೆಯನ್ನು ನೀಡಿದರು.
ಬಸ್ ಅತೀ ವೇಗದಲ್ಲಿ ಚಲಿಸಿದ ಕಾರಣ ಅಪಘಾತವಾಗಿದೆ ಎಂದು ಗಾಯಾಳುಗಳು ಶಾಸಕರೊಂದಿಗೆ ವಿವರಣೆ ನೀಡಿದ ಹಿನ್ನಲೆಯಲ್ಲಿ ಬಸ್ ಚಾಲಕನ ಮೇಲೆ ಸೂಕ್ತ ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ಸೂಚಿಸಿದರು.ಎಲ್ಲಾ ಗಾಯಾಳುಗಳಿಗೆ ಯಾವುದೇ ರೀತಿಯ ಬಿಲ್ ಪಡೆಯದೇ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ಮುಖ್ಯ ವೈದ್ಯರಿಗೆ ನಿರ್ದೇಶನ ನೀಡಿದರು.





