ಕೊಡಗು

ಮಡಿಕೇರಿ: PWD ಎಂಜಿನಿಯರ್ ಗಿರೀಶ್ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಇಲಾಖೆಯ (PWD) ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ತಂಡ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.

ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ಅವರ ನೇತೃತ್ವದಲ್ಲಿ ಮೈಸೂರಿನಲ್ಲಿರುವ ಗಿರೀಶ್ ಅವರ ನಿವಾಸ ಹಾಗೂ ಸಂಬಂಧಿತ ಆಸ್ತಿಗಳ ಮೇಲೆ ಶೋಧ ನಡೆದಿದೆ. ಇದೇ ವೇಳೆ ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್‌ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ಅವರ ತಂಡ ಗಿರೀಶ್ ಅವರ ಕಚೇರಿ ಮತ್ತು ಇತರೆ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ.

ಅಕ್ರಮ ಆಸ್ತಿ ಸಂಗ್ರಹಿಸಿದರೆಂಬ ಆರೋಪದ ಹಿನ್ನೆಲೆಯಲ್ಲಿ ಗಿರೀಶ್ ಅವರ ಆದಾಯಕ್ಕೆ ಹೊಂದಿಕೆ ಆಗದ ಆಸ್ತಿಗಳ ವಿವರಗಳನ್ನು ಪರಿಶೀಲಿಸುವ ಕಾರ್ಯ ಸ್ಥಳೀಯ ಲೋಕಾಯುಕ್ತ ತಂಡಗಳಿಂದ ಮುಂದುವರೆಯುತ್ತಿದೆ. ದಾಖಲೆಗಳು, ಮಹತ್ವದ ದಾಖಲೆಪತ್ರಗಳು ಹಾಗೂ ಸಂಪತ್ತಿನ ವಿವರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago