ಕೊಡಗು

ಮಡಿಕೇರಿ: ಸಂಭ್ರಮದ ದಸರಾ ಆಚರಿಸಲು ಜಿಲ್ಲಾಡಳಿತಕ್ಕೆ ಸಚಿವ ಭೋಸರಾಜು ಸೂಚನೆ

  • ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಿಸಲು ಅಗತ್ಯ ಸಿದ್ದತೆ ಕೈಗೊಳ್ಳಿ: ಸಚಿವ ಎನ್‌ ಎಸ್‌ ಭೋಸರಾಜು
  • ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸ ಸೂಚನೆ
  • ಸರ್ಕಾರದ ವತಿಯಿಂದ ಅಗತ್ಯ ಅನುದಾನ ಹಾಗೂ ಸಹಾಯದ ಭರವಸೆ

ಮಡಿಕೇರಿ: ಎಲ್ಲರೂ ಪಾಲ್ಗೊಳ್ಳುವಿಕೆಯ ಮೂಲಕ ವಿಜ್ರಂಭಣೆಯ ದಸರಾ ಆಚರಣೆಗೆ ಅಗತ್ಯ ಸಿದ್ದತೆ ಪ್ರಾರಂಭಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ ಎಸ್‌ ಭೋಸರಾಜು ಸೂಚನೆ ನೀಡಿದರು.

ಇಂದು ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ದಸರಾ ಸಮಿತಿ ಹಾಗೂ ಮಂಟಪ ಉಸ್ತುವಾರಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಿ ಮಾತನಾಡಿದರು.

ವಿಜ್ರಂಭಣೆಯ ದಸರಾ ಆಚರಣೆ
ಮಡಿಕೇರಿ ಹಾಗೂ ಗೋಣಿಕೋಪ್ಪ ದಸರಾ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ದೇಶ ವಿದೇಶದ ಮಟ್ಟದಲ್ಲಿ ಖ್ಯಾತಿಯನ್ನು ಹೊಂದಿದೆ. ಈ ಬಾರಿಯ ಮಡಿಕೇರಿ – ಗೋಣಿಕೊಪ್ಪ ದಸರಾವನ್ನ ವಿಜ್ರಂಭಣೆಯಿಂದ ಆಚರಿಸಲು ಅಗತ್ಯ ತಯಾರಿ ನಡೆಸಿಕೊಳ್ಳಬೇಕು. ಸಮಿತಿ ಹಾಗೂ ದಶಾ ಮಂಟಪಗಳ ಸಮಿತಿ ಸಭೆಯನ್ನು ನಡೆಸಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸರಕಾರದ ವತಿಯಿಂದ ಹಿಂದಿನ ಬಾರಿಗಿಂತಲೂ ಹೆಚ್ಚಿನ ಅನುದಾನ ದೊರಕಿಸಿ ಕೊಡಲು ನಾವೆಲ್ಲರೂ ಪ್ರಯತ್ನ ನಡೆಸಿದ್ದೇವೆ ಎಂದರು.

ರಸ್ತೆಗಳ ಕಾಮಗಾರಿ ಮುಗಿಸಲು ಗಡುವು
ದಸರಾ ಸಂಭ್ರಮದಲ್ಲಿ ಭಾಗವಹಿಸಲು ಸುಮಾರು ನಾಲ್ಕು ಲಕ್ಷ ಜನರು ಜಿಲ್ಲೆಗೆ ಭೇಟಿ ನೀಡುತ್ತಾರೆ. ಜಿಲ್ಲೆಯನ್ನು ಸಂಪರ್ಕಿಸುವ ರಸ್ತೆಗಳು ಹಾಗೂ ನಗರದಲ್ಲಿನ ರಸ್ತೆಗಳನ್ನು ಸುಸ್ಥಿಯಲ್ಲಿಡುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಚುರುಕುಗೊಳಿಸಬೇಕು. ಯುದ್ದೋಪಾದಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಕೈಗೊಳ್ಳಬೇಕು. ಸೆಪ್ಟೆಂಬರ್ ತಿಂಗಳ ಅಂತ್ಯದ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಶಾಶ್ವತ ವೇದಿಕೆ ನಿರ್ಮಾಣಕ್ಕೆ ಚಿಂತನೆ
ಪ್ರತಿ ಬಾರಿ ದಸರಾ ಹಬ್ಬದ ಸಂಧರ್ಭದಲ್ಲಿ ಹೆಚ್ಚಿನ ಅನುದಾನ ವೇದಿಕೆ ನಿರ್ಮಾಣದ ಕಡೆಗೆ ವ್ಯಯವಾಗುತ್ತಿದೆ. ಇದನ್ನ ಉಳಿಸುವ ಹಾಗೂ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಶಾಶ್ವತ ವೇದಿಕೆ ನಿರ್ಮಾಣ ಅಗತ್ಯವಾಗಿದೆ. ಈ ಬಾರಿಯ ದಸರಾ ನಂತರ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮ ಆಯೋಜನೆಯಲ್ಲಿ ಎಲ್ಲರೂ ಕೈಜೋಡಿಸುವುದು ಅಗತ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ದಸರಾ ಆಚರಣೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆಗೆ ಜನರು ಕೈಜೋಡಿಸಬೇಕು. ಮಂಟಪಗಳ ಎತ್ತರ ಹಾಗೂ ಸೌಂಡ್‌ ಸಿಸ್ಟಮ್‌ ಬಳಕೆಯ ಬಗ್ಗೆ ದಶಮಂಟಪಗಳ ಮುಖಂಡರು ಒಮ್ಮತದ ನಿರ್ಧಾರ ಕೈಗೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಈ ಬಾರಿ ಕಾಫಿ ಫೆಸ್ಟಿವಲ್‌ ಸೇರಿದಂತೆ ವಿನೂತನ ಕಾರ್ಯಕ್ರಮಗಳ ಆಯೋಜನೆಗೂ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರಾದ ಮಂಥರ್‌ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು, ಮಡಿಕೇರಿ ಹಾಗೂ ಗೊಣಿಕೊಪ್ಪ ದಸರಾ ಸಮಿತಿಯ ಸದಸ್ಯರು, ದಶಾಮಂಟಪಗಳ ಪ್ರಮುಖರು ಸೇರಿದಂತೆ, ಸಮಿತಿಗಳ ಸದಸ್ಯರು ಪಾಲ್ಗೊಂಡಿದ್ದರು .

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

29 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

42 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

53 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

1 hour ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago