Madikeri | MLA Manthar Gowda inspects a cracked retaining wall.
ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಶಾಸಕ ಡಾ.ಮಂಥರ್‌ಗೌಡ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು.
ಬಿರುಕು ಬಿಟ್ಟಿರುವ ತಡೆಗೋಡೆ ಕುಸಿದು ಬಿದ್ದರೆ ಹೆದ್ದಾರಿ ಬಂದ್ ಆಗಲಿದೆ. ಆದ್ದರಿಂದ ತಜ್ಞ ಇಂಜಿನಿಯರ್‌ಗಳನ್ನು ಆಹ್ವಾನಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕೆಂದು ಹೆದ್ದಾರಿ ವಿಭಾಗದ ಇಂಜಿನಿಯರ್‌ಗೆ ಸೂಚಿಸಿದರು. ನವೆಂಬರ್‌ವರೆಗೂ ಮಳೆ ಇರುವ ಸಾಧ್ಯತೆ ಇದೆ. ಆದ್ದರಿಂದ ಹೆದ್ದಾರಿ ಸುರಕ್ಷತೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 2021-22 ರಲ್ಲಿ ತಡೆಗೋಡೆ ನಿರ್ಮಿಸಿದೆ. ತಡೆಗೋಡೆ ಸಮೀಪದಲ್ಲಿ 5 ಕುಟುಂಬಗಳಿದ್ದು, ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದೆ. ಹೆದ್ದಾರಿ ಸುರಕ್ಷತೆ ಸಂಬಂಧಿಸಿದಂತೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಶಾಸಕರು ಸುದ್ದಿಗಾರರಿಗೆ ತಿಳಿಸಿದರು.
ತಹಶಿಲ್ದಾರ್ ಶ್ರೀಧರ್, ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರೀಶ್, ಲೋಕೋಪಯೋಗಿ ಇಲಾಖೆ ಇಇ ಇಬ್ರಾಹಿಂ, ಎಇಇ ಸತೀಶ್, ಪೌರಾಯುಕ್ತ ರಮೇಶ್, ಜಿ.ಪಂ.ಇಂಜಿನಿಯರ್‌ಗಳು, ಸ್ಥಳೀಯರು ಹಾಜರಿದ್ದರು.
ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…
ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…