ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು ತಾಯಿ ಪ್ರೇಮ (45) ಹಾಗೂ ಪುತ್ರಿ ಪ್ರಿಯಾಂಕ (14) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ತಾಯಿ-ಮಗಳ ನಡುವೆ ಪರಸ್ಪರ ಜಗಳ ನಡೆದಿದ್ದು, ತಾನು ಕೆರೆಗೆ ಹಾರುವುದಾಗಿ ಹೇಳಿ ಪ್ರಿಯಾಂಕ ಓಡಿದ್ದಾಳೆ. ಮಗಳನ್ನು ತಡೆಯಲು ತಾಯಿ ಪ್ರೇಮ ಆಕೆಯ ಹಿಂದೆ ಓಡಿದ್ದಾರೆ.
ಈ ವೇಳೆ ಪ್ರಿಯಾಂಕ ಕೆರೆಗೆ ಹಾರಿದ್ದಾಳೆ. ಮಗಳು ಕೆರೆಗೆ ಹಾರಿದ್ದನ್ನು ಕಂಡ ತಾಯಿ ಪ್ರೇಮ ಕೂಡ ಕೆರೆಗೆ ಹಾರಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದರೂ ಅದು ವಿಫಲವಾಗಿದೆ.
ಇಂದು ಬೆಳಿಗ್ಗೆ ಅಗ್ನಿಶಾಮಕ ಸಿಬ್ಬಂದಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮಡಿಕೇರಿಯ ಶವಗಾರಕ್ಕೆ ರವಾನಿಸಲಾಗಿದೆ.
ಘಟನೆ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಭಾಗಮಂಡಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…