ಕೊಡಗು

ಮಡಿಕೇರಿ: ಕೆಡಿಪಿ ಸಭೆಯಲ್ಲಿ ಒಂದೂ ಮಾತನಾಡದ ಸಂಸದ ಯದುವೀರ್‌

ಮಡಿಕೇರಿ: ಇಲ್ಲಿ ಶನಿವಾರ(ಜು.7) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೊದಲ ಬಾರಿಗೆ ಭಾಗವಹಿಸಿದ್ದ ನೂತನ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಒಂದೂ ಮಾತನಾಡದೇ ಸಭೆಯುದ್ದಕ್ಕೂ ಮೌನವಾಗಿಯೇ ಕುಳಿತಿದ್ದರು.

ಸಭೆಯಲ್ಲಿ ಭಾಗವಹಿಸಿದ ಉಸ್ತುವಾರಿ ಸಚಿವ ಎನ್.ಎಸ್‌ ಭೋದರಾಜು ಹಾಗೂ ಶಾಸಕ ಡಾ.ಮಂತರ್‌ಗೌಡ ಜಿಲ್ಲೆಯನ್ನು ಬಾಧಿಸುತ್ತಿರುವ ಕೆಲವು ಸಮಸ್ಯೆಗಳಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ, ಡೆಂಗ್ಯೂ, ಮಳೆ ಹಾಗೂ ಪ್ರಾಕೃತಿಕ ವಿಕೋಪ ಸೇರಿದಂತೆ ಮೊದಲಾದ ಸಮಸ್ಯೆಗಳ ಕುರಿತು ಸಭೆಯಲ್ಲಿದ್ದ ಚುನಾಯಿತರು ಅಧಿಕಾರಿಗಳನ್ನು ಪ್ರಶ್ನಿಸಿ, ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು. ಆದರೆ, ನೂತನ ಸಂಸದ ಯದುವೀರ್‌ ಸಭೆಯುದ್ದಕ್ಕೂ ಯಾವುದೇ ಚರ್ಚೆಯಲ್ಲಿ ಭಾಗವಹಿಸದೆ, ಮೂಕಪ್ರೇಕ್ಷಕರಂತೆ ಕುಳಿತು ಅರ್ಧದಲ್ಲೇ ಸಭೆಯಿಂದ ನಿರ್ಗಮಿಸಿದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಮಡಿಕೇರಿ ಕೆಡಿಪಿ ಸಭೆಗೆ ಆಹ್ವಾನ ಬಂದಿತ್ತು. ಅದರಂತೆ ಸಭೆಗೆ ಬಂದಿದ್ದೇನೆ. ನಾನು ಕಲಿಯುವುದು ಬಹಳ ಇದೆ. ಇದೊಂದು ಅನುಭವ. ಸದ್ಯದಲ್ಲೇ ದಿಶಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಎಲ್ಲಾ ಸಮಸ್ಯೆ ಬಗ್ಗೆ ಚರ್ಚಿಸಿವೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

6 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

6 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

6 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

6 hours ago