ಮಡಿಕೇರಿ: ಸೂರ್ಲಬ್ಬಿಯಲ್ಲಿ ಮೇ ೯ರಂದು ನಡೆದಿದ್ದ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದು, ಕೊಲೆ ಆರೋಪಿ ಪ್ರಕಾಶ್ ಓಂಕಾರಪ್ಪನನ್ನು ಇಂದು ( ಮೇ 11 ) ಬೆಳಗ್ಗೆ ಬಂಧನ ಮಾಡಲಾಗಿದೆ.
ಬಂಧನಕ್ಕೊಳಗಾದ ಪ್ರಕಾಶ್ ಓಂಕಾರಪ್ಪ ಪೊಲೀಸ್ ವಿಚಾರಣೆ ವೇಳೆ ಹತ್ಯೆಗೀಡಾದ ವಿದ್ಯಾರ್ಥಿನಿ ಯುಎಸ್ ಮೀನಾಳ (16) ರುಂಡವನ್ನು ಪೊದೆಯೊಂದರಲ್ಲಿ ಇಟ್ಟಿದ್ದಾಗಿ ಬಾಯಿಬಿಟ್ಟಿದ್ದಾನೆ. ಆರೋಪಿ ನೀಡಿದ ಮಾಹಿತಿಯ ಅನುಸಾರ ಆತ ಕೃತ್ಯ ಎಸಗಿದ 300 ಮೀಟರ್ ದೂರದ ಪೊದೆಯೊಂದರಲ್ಲಿ ಬಾಲಕಿಯ ರುಂಡ ಪತ್ತೆಯಾಯಿತು. ಯಾವುದೇ ದೊಡ್ಡ ಹಾನಿಯಾಗದ ಸ್ಥಿತಿಯಲ್ಲಿ ತುಂಡರಿಸಿದ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜತೆಗೆ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರ ಮತ್ತು ರಕ್ತಸಿಕ್ತ ಬಟ್ಟೆಗಳನ್ನೂ ಸಹ ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.
ಮೀನಾಳೊಂದಿಗೆ ನಿಶ್ಚಿತಾರ್ಥವನ್ನು ರದ್ದುಗೊಳಿಸಿದ ನಂತರ ನಾನು ಕಂಗಾಲಾದೆ. ಕಾಡಿನಲ್ಲಿ ಆಕೆಯೊಂದಿಗೆ ತೀವ್ರ ವಾಗ್ದಾದಕ್ಕಿಳಿದು ನಂತರ ಕೃತ್ಯ ಎಸಗಿರುವುದಾಗಿ ಆರೋಪಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…