ಕೊಡಗು

ಮಡಿಕೇರಿ : ಹೋಂ ಸ್ಟೇಗಳ ಕಡ್ಡಾಯ ನೋಂದಣಿಗೆ ಜಿಲ್ಲಾಡಳಿತ ಸೂಚನೆ

ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ.

ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆ ಈ ಮೂಲಕ ತಿಳಿಸಲಾಗಿದೆ.

ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ https://kttf.karnatakatourism.org/login ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ.

ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಅಥವಾ ಈ-ಮೇಲ್ : ddkodagutourism@gmail.com ಗೆ ತಿಳಿಸಬಹುದು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಟೂರ್ಸ್ ಅಂಡ್ ಟ್ರಾವೆಲ್ ಏಜೆನ್ಸಿ ಹಾಗೂ ಮನರಂಜನಾ ಪಾರ್ಕ್‍ಗಳ ಉದ್ದಿಮೆದಾರರುಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್ http://kttf.karnatakatourism.org/ನಲ್ಲಿ ತಮ್ಮ ಸಂಸ್ಥೆಯನ್ನು ನೊಂದಣಿ ಮಾಡುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ಕೋರಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

2 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

9 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

15 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

14 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago