ಕೊಡಗು

ಮಡಿಕೇರಿ: ದೇವಾಲಯದಲ್ಲಿ ಕಳ್ಳತನ ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್

ಮಡಿಕೇರಿ: ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಕೋಟೆ ಮಾರಿಯಮ್ಮ ದೇವಾಲಯದಲ್ಲಿ ಆಗಸ್ಟ್‌ 16 ರಂದು ದೇವಾಲಯದ ಹುಂಡಿ ಹಾಗೂ ದೇವರ ವಿಗ್ರಹದ ಆಭರಣಗಳನನು ಕಳ್ಳತನ ಮಾಡಿದ್ದ ಅಸ್ಸಾಂ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ದೇವಾಲಯ ಕಳ್ಳತನದ ಉದ್ದೇಶದಿಂದಲೇ ಮಡಿಕೇರಿಗೆ ಬಂದಿದ್ದ ಅಸ್ಸಾಂ ಮೂಲದ ಚೋರರನ್ನು ಕೖತ್ಯ ನಡೆದ 8 ದಿನಗಳಲ್ಲಿಯೇ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್ ವರದಿ ಇಲ್ಲಿದೆ.

ದಿನಾಂಕ: 16-08-2024 ರ ಮಧ್ಯ ರಾತ್ರಿಯಲ್ಲಿ ಅಪರಿಚಿತ ವ್ಯಕ್ತಿಗಳು ದೇವಸ್ಥಾನದ ಮುಖ್ಯ ದ್ವಾರದ ಬೀಗವನ್ನು ಮುರಿದು ದೇವಸ್ಥಾನದಲ್ಲಿ ಇದ್ದಂತಹ 2 ಬಂಡಾರದ ಹುಂಡಿಗಳನ್ನು ಒಡೆದು ಅಂದಾಜು ರೂ. 2,50,000/-ಗಳ ನಗದನ್ನು ಹಾಗೂ ದೇವಿಯ ಮೂರ್ತಿಗೆ ಅಳವಡಿಸಿದ್ದ ಸುಮಾರು ರೂ. 1,16,000/- ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳತನವಾಗಿರುವ ಕುರಿತು ದೇವಾಲಯದ ಟ್ರಸ್ಟಿ ಮ್ಯಾನೇಜರ್ ಸೋಮಯ್ಯ ಟಿ.ಪಿ ಅವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ್ದ ಮಡಿಕೇರಿ ನಗರ ಪೊಲೀಸ್, ಠಾಣೆಯಲ್ಲಿ ಕಲಂ: 331(4), 305 ಬಿಎನ್‌ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು.

ಸದರಿ ಪ್ರಕರಣದ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್, ಡಿಸಿಪಿ ಮಹೇಶ್‌ ಕುಮಾರ್, ಮಡಿಕೇರಿ ನಗರ ವೃತ್ತದ ಅಧಿಕಾರಿ/ಸಿಬ್ಬಂದಿಯವರುಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದರು.

ಬಳಿಕ ಆರೋಪಿಗಳನ್ನು ಪತ್ತೆ ಹಚ್ಚಲು ಡಿಸಿಪಿ ಮಹೇಶ್‌ ಕುಮಾರ್, ಸಿ.ಪಿ.ಐ ರಾಜು ಪಿ.ಕೆ, ಪಿ.ಎಸ್.ಐ ಲೋಕೇಶ್ ಹಾಗೂ ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು, ಡಿಸಿಆರ್‌ಬಿ & ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆಯನ್ನು ಕೈಗೊಂಡಿದ್ದರು.

ಸದರಿ ಪ್ರಕರಣದ ಆರೋಪಿಗಳನ್ನು ದಿನಾಂಕ: 22-08-2024 ರಂದು ಕಾಂತೂರು-ಮೂರ್ನಾಡು ಗ್ರಾಮದ ತೆಕ್ಕಡ ಪ್ರಸನ್ನ ಅವರ ತೋಟದ ಲೈನು ಮನೆಯಲ್ಲಿ ವಾಸವಿರುವ ಅಲ್ತಾಬ್ ಆಲಿ, 27 ವರ್ಷ, ಮೂಲತಃ ಅಸ್ಸಾಂ ರಾಜ್ಯ ಮತ್ತು ಕೃತ್ಯ ನಡೆಸುವ ಉದ್ದೇಶದಿಂದ ಅಸ್ಸಾಂನಿಂದ ಬಂದಂತಹ ಮೀರ್ ಹುಸೇನ್ @ ನೂರ್ ಹುಸೇನ್, 36 ವರ್ಷ, ಆಸ್ಸಾಂ ರಾಜ್ಯ ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.

ಕಳವು ಮಾಡಿದ್ದ 3 ಗ್ರಾಂ ಚಿನ್ನದ ಮಾಂಗಲ್ಯ, 111 ಗ್ರಾಂ ಬೆಳ್ಳಿಯ ಕಿರೀಟ, 59 ಗ್ರಾಂ ಬೆಳ್ಳಿಯ ದೃಷ್ಟಿ ಬೊಟ್ಟು ಆಭರಣಗಳನ್ನು & ರೂ. 95,501/- ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಶ್ಲಾಘಿಸಿರುತ್ತಾರೆ.

ವಿಶೇಷ ಸೂಚನೆ:– ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ / ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ. ಎಂದು ಪೊಲೀಸ್ ವರಿಷ್ಟಾಧಿಕಾರಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

1 hour ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

2 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

2 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

2 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

3 hours ago