Mysore
23
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಮಡಿಕೇರಿ : ಭಾರೀ ವಾಹನ ಸಂಚಾರ ನಿಷೇಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆ.೬ರಿಂದ ೨೫ರವರೆಗೆ ಆದೇಶ ಹೊರಡಿಸಲಾಗಿದೆ.

ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ ೧೮,೫೦೦ ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಜಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು, ಆರಿಕ್ಯೂಲೇಟೆಡ್ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ರಸಗೊಬ್ಬರ ಪೂರೈಕೆ ವಾಹನಗಳು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ.

Tags:
error: Content is protected !!