ಮಡಿಕೇರಿ : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಮೆರವಣಿಗೆ ಉದ್ದಕ್ಕೂ ವಕ್ಫ್ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಬಳಿಕ ಗಾಂಧಿ ಮೈದಾನಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಿದರು.
ಪ್ರತಿಭಟನೆಯಲ್ಲಿ ಕೊಡಗು ಜಿಲ್ಲಾ ಜಮಯತುಲ್ ಉಲಮಾ ಅಧ್ಯಕ್ಷ ಸೈಯದ್ ಶಹಾಬುದ್ದೀನ್ ಆಲ್, ಹೈದ್ರೋಸಿ ತಂಙಳ್,
ಕೊಡಗು ಜಿಲ್ಲಾ ಸಹಾಯಕ ಖಾಝಿ ಅಬ್ದುಲ್ಲಾ ಫೈಸಿ, ಲತೀಫ್ ಸುಂಟಿಕೊಪ್ಪ, ಎಂ ಬಿ.ಹಮೀದ್, ಯಾಕೂಬ್ ಬಜೆಗುಂಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.





