ಕೊಡಗು

ಮಡಿಕೇರಿ | ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಮಡಿಕೇರಿ : ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಮೆರವಣಿಗೆ ಉದ್ದಕ್ಕೂ ವಕ್ಫ್‌ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಬಳಿಕ ಗಾಂಧಿ ಮೈದಾನಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಿದರು.

ಪ್ರತಿಭಟನೆಯಲ್ಲಿ ಕೊಡಗು ಜಿಲ್ಲಾ ಜಮಯತುಲ್ ಉಲಮಾ ಅಧ್ಯಕ್ಷ ಸೈಯದ್ ಶಹಾಬುದ್ದೀನ್ ಆಲ್, ಹೈದ್ರೋಸಿ ತಂಙಳ್,
ಕೊಡಗು ಜಿಲ್ಲಾ ಸಹಾಯಕ ಖಾಝಿ ಅಬ್ದುಲ್ಲಾ ಫೈಸಿ, ಲತೀಫ್ ಸುಂಟಿಕೊಪ್ಪ, ಎಂ ಬಿ.ಹಮೀದ್‌, ಯಾಕೂಬ್ ಬಜೆಗುಂಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

2 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

5 mins ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

11 mins ago

ರಾಷ್ಟ್ರ, ರಾಜ್ಯ ರಾಜಕಾರಣದ ರಂಗು

೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು…

16 mins ago

ಅವಧಿಗೂ ಮುನ್ನ ಶಾಲೆಗೆ ಬೀಗ; ಕಲಿಕೆಗೆ ಹಿನ್ನಡೆ

ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ  ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…

26 mins ago

2026ರ ಸ್ವಾಗತಕ್ಕೆ ತಾಣಗಳೆಡೆಗೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…

30 mins ago