ಕೊಡಗು

ಮಡಿಕೇರಿ | ಅರಣ್ಯ ಇಲಾಖೆಯಿಂದ ಕಾರ್ಮಿಕನ ಬಂಧನ ಖಂಡಿಸಿ ನಾಳೆ ಪ್ರತಿಭಟನೆ

ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ.

ಈ ಸಂಬಂಧ ಮಾ.14ರ ಶುಕ್ರವಾರ ಸಂಜೆ 5ಗಂಟೆಗೆ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ನಗರದಲ್ಲಿ ಗುರವಾರ ಸಂಜೆ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಮಂಡೇಪಂಡ ಪ್ರವೀಣ್ ಬೋಪಯ್ಯ ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪಿದ ಘಟನೆಗೆ ಸಂಬಂಧಿಸಿದಂತೆ ತೋಟದ ಕಾರ್ಮಿಕನನ್ನು ಬಂಧಿಸಿ ಹಲ್ಲೆನಡೆಸಿರುವ ಅರಣ್ಯ ಇಲಾಖೆ ತಕ್ಷಣ ಆತನನ್ನು ಬಿಡುಗಡೆ ಮಾಡಿ ಆತನ ಮೇಲಿನ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಮಾ.18 ರಂದು ಕಾಡಾನೆ ತೋಟಕ್ಕೆ ಬಾರದಂತೆ ತಡೆಗಟ್ಟಬೇಕು ಹಾಗೂ ವನ್ಯಮೃಗಗಳು ಮೃತಪಟ್ಟರೆ ಆಧಾರ ರಹಿತ ಸುಳ್ಳು ಮೊಕದ್ದಮೆ ಸೃಷ್ಟಿಸಿ ರೈತ-ಕಾರ್ಮಿಕನನ್ನು ಆರೋಪಿಸ್ಥಾನದಲ್ಲಿ ನಿಲ್ಲಿಸುವ ಕ್ರಮ ಆಗುತ್ತಿದ್ದು ಅರಣ್ಯ ಇಲಾಖೆ ಯಲ್ಲಿ ದಾಖಲಾದ ಮೊಕದ್ದಮೆ ಕೈಬಿಡಬೇಕು ಎಂದು ಒತ್ತಾಯಿಸಿ ಮಡಿಕೇರಿ ಅರಣ್ಯ ಭವನ ಕ್ಕೆ ರೈತ ಸಂಘ, ಕಾರ್ಮಿಕ ಸಂಘಟನೆಗಳು,ಮನವಿ ಸಲ್ಲಿಸಲಾಗುವುದು ಎಂದರು.

ವೇದಿಕೆಯಲ್ಲಿ ಅಮ್ಮತ್ತಿ ಹೋಬಳಿ ಅಧ್ಯಕ್ಷ ಬಿ.ಸಿ ಬೋಪಣ್ಣ, ಕಾರ್ಮಿಕ ಮುಖಂಡ ಭರತ್, ಜಿಲ್ಲಾ ಸಮಿತಿ ಖಜಾಂಚಿ ಸಬೀತಾ ಭೀಮಯ್ಯ ವಿಕ್ರಮ್ ಬಿದ್ದಪ್ಪ ಸಜೀವನ್,ಲಿಖಿತ್ ಸೋಮಣ್ಣ,ಸಂಚಾಲಕರಾದ ಸಿ.ಬಿ ಪೂಣಚ್ಚ,ಹರೀಶ್ ಸೋಮಯ್ಯ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

8 mins ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

12 mins ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

19 mins ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

44 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

49 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

52 mins ago