ಕೊಡಗು

ಮಡಿಕೇರಿ: ಎರಡು ದಿನಗಳ ಕಾಲ ನಡೆದ “ರಾಮೋತ್ಸವ” ಕಾರ್ಯಕ್ರಮ

ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ  ವಿಜೃಂಭಣೆಯಿಂದ ನಡೆಯಿತು.

ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ಚಂಡೆ, ತೈಯಂ ಕುಣಿತ, ಫ್ಲವರ್ ಡ್ಯಾನ್ಸ್, ತಮಟೆ, ರಾಮ, ಆಂಜನೇಯ ವೇ?ಧಾರಿಗಳು, ಹುಲಿ ವೇಷ, ಭಜನಾ ತಂಡಗಳು, ಕಳಸ ಹಾಗೂ ರಾಮನ ಪಲ್ಲಕ್ಕಿ ಮೆರವಣಿಗೆ ಆಕರ್ಷಿಸಿತು.

ಮೆರವಣಿಗೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ರಾಮೋಹಳ್ಳಿ ಶ್ರೀ ಸಿದ್ದಾರೂಢ ಮಿಷನ್ ಆಶ್ರಮದ ಶ್ರೀ ಡಾ.ಆರೂಢ ಭಾರತಿ ಸ್ವಾಮೀಜಿ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.

ದೇವಾಲಯದಲ್ಲಿ ಪಲ್ಲಕ್ಕಿಯನ್ನು ಹೊತ್ತು ಪೂಜೆ ಸಲ್ಲಿಸಿದ ನಂತರ ಅನ್ನದಾನ ನೆರವೇರಿತು. ರಾತ್ರಿ ವಿವಿಧ ಸಮುದಾಯಗಳಿಂದ ಆಕರ್ಷಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಏ.6 ರಂದು ಶ್ರೀ ಕೋದಂಡ ರಾಮ ದೇವಾಲಯದ ಕ್ಷೇತ್ರ ತಂತ್ರಿಗಳಾದ ಬ್ರ.ಶ್ರೀ.ವೇ.ಮೂ. ಶ್ರೀಕೃಷ್ಣ ಉಪಾಧ್ಯ ಅವರಿಂದ ತತ್ವ ಕಳಸ ಹೋಮ, ನವಗ್ರಹ ಹೋಮ, ತತ್ವ ಕಳಶಾಭಿಷೇಕ, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ರಾಮ ತಾರಕ ಹೋಮ, ಕಲಾ ಹೋಮ, ಬಟ್ಟಲು ಕಾಣಿಕೆ, ಅಲಂಕಾರ ಪೂಜೆ ನೆರವೇರಿತು. ಮಹಾಪೂಜೆಯ ನಂತರ ತೀರ್ಥಪ್ರಸಾದ, ಕೋಸಂಬರಿ, ಪಾನಕ ವಿತರಣೆ ಮತ್ತು ಅನ್ನಸಂತರ್ಪಣೆಯಾಯಿತು.

ಆರೋಗ್ಯ ಶಿಬಿರ: ರಾಮೋತ್ಸವದ ಅಂಗವಾಗಿ ಕೊಡಗು ಮೆಡಿಕಲ್ ಕಾಲೇಜು ವತಿಯಿಂದ ಶ್ರೀ ಕೋದಂಡರಾಮ ದೇವಾಲಯದ ಆವರಣದಲ್ಲಿ ರಕ್ತ ಪರೀಕ್ಷೆ ಮತ್ತು ರಕ್ತದೊತ್ತಡ (ಬಿಪಿ) ಪರೀಕ್ಷೆ ನಡೆಯಿತು. 40 ವರ್ಷ ಮೇಲ್ಪಟ್ಟವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

1 hour ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago