Mysore
26
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಮಡಿಕೇರಿ: ಶರಣ್ಯಾಳಿಗಾಗಿ ಇಂದು ಕೂಡ ತೀವ್ರಗೊಂಡ ಶೋಧ ಕಾರ್ಯಾಚರಣೆ

ಮಡಿಕೇರಿ: ತಡಿಯಂಡಮೋಳ್‌ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ ಆಕೆಯ ಸುಳಿವು ಸಿಕ್ಕಿಲ್ಲ. ನಾಲ್ಕು ತಂಡಗಳನ್ನು ರಚಿಸಿ ಶೋಧಕಾರ್ಯಾಚರಣೆ ನಡೆಸುತ್ತಿದ್ದರೂ ಶರಣ್ಯಾ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ.

ತಡಿಯಂಡಮೋಳ್‌ ಬೆಟ್ಟದಲ್ಲಿ ಇಂದು ನಾಲ್ಕನೇ ದಿನದ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಸಿಬ್ಬಂದಿಗಳು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿ ಕಕ್ಕಬ್ಬೆ ಗ್ರಾಮದಲ್ಲಿ ಏಪ್ರಿಲ್.‌2ರಂದು ಟ್ರೆಕ್ಕಿಂಗ್‌ನಲ್ಲಿ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದು, ಆಕೆಯ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ.

 

Tags:
error: Content is protected !!